

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ’ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು. ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮಳೆಯಾಗಲಿದೆ.
ಕ್ಯಾಸಲ್ರಾಕ್ ಯಲ್ಲಾಪುರ, ಲೋಂಡಾ, ಕದ್ರಾ, ಜೋಯ್ಡಾ, ಮುಂಡಗೋಡ, ಗುಂಜಿ, ಕಮ್ಮರಡಿ, ತಾಳಗುಪ್ಪ, ಸಕಲೇಶಪುರದಲ್ಲಿ ಮಳೆಯಾಗಲಿದೆ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.