ವಾರಾಂತ್ಯ ಲಾಕ್ ಡೌನ್; ಬೆಂಗಳೂರಿನಲ್ಲಿ ರಾತ್ರಿಯಿಂದ ನಮ್ಮ ಮೆಟ್ರೋ ರೈಲು, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

JANANUDI.COM NETWORK

ಬೆಂಗಳೂರು,23: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಹರಡದಂತೆ ಜಾಗ್ರತೆ ಮಾಡಲು, ಇವತ್ತು ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರ್ಣಾಟ್ಕ ಸಂಪೂರ್ಣ ಸ್ತಬ್ದವಾಗಲಿದೆ.
ವಾರಾಂತ್ಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಬಿಎಂಟಿಸಿ ಬಸ್ ಗಳು ಮತ್ತು ನಮ್ಮ ಮೆಟ್ರೋ ರೈಲುಗಳು , ಸಂಚರಿಸುವುದಿಲ್ಲ. ತುರ್ತು ಸೇವೆಗಾಗಿ ಮಾತ್ರ 500 ಬಸ್ ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಸಿಖಾ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಸಂಚಾರ ಸಹ ಸಂಪೂರ್ಣ ಬಂದ್ ಆಗಲಿದ್ದು, ಇಂದು ಸಂಜೆ 7.30 ರಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ಮೆಟ್ರೋ ರೈಲು ಸಂಚರಿಸುವುದಿಲ್ಲ. ಇಂದು ಸಂಜೆ 7.30ಕ್ಕೆ ಮೈಸೂರು ರಸ್ತೆ, ಬೈಯಪ್ಪನಹಳ್ಳಿ, ನಾಗಸಂದ್ರ ಮತ್ತು ಸಿಲ್ಕ್ ಸಂಸ್ಥೆಯಿಂದ ಕೊನೆಯ ರೈಲು ಹೊರಡಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಸೋಮವಾರ ಬೆಳಗ್ಗೆ 7ರಿಂದ ಎಂದಿನಂತೆ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಲಾಗಿದೆ.
ದೀಡಿರ್ ಇಂತಹ ಬದಲಾವಣೆಗಳಿಂದ ತೊಂದರೆಯಾಗುವ ಸಂಭವ ಇದೆ.