

ಶ್ರೀನಿವಾಸಪುರ : ಮಹಿಳೆಯರು ಇಂದು ಪುರಷರಂತೆ ಸರಿ ಸಮಾನರಾಗಿದ್ದು , ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸಿ ಸಮಾಜದಲ್ಲಿ ಗುರ್ತಿಸಿಕೊಂಡಿದ್ದಾರೆ ಎಂದು ವಕೀಲೆ ಸೌಭಾಗ್ಯ ತಿಳಿಸಿದರು.
ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಗಾಟಿಸಿ ಮಾತನಾಡಿದರು.
ಕಸಾಪ ಜಿಲ್ಲಾಧ್ಯಕ್ಷ ಎನ್. ಬಿ.ವೇಣುಗೋಪಾಲ್ ಮಾತನಾಡಿ ಇಂದು ಮಹಿಳೆಯರು ಎಲ್ಲಾ ರಂಗಗಳಲ್ಲಿ ಗುರ್ತಿಸಿಕೊಳ್ಳುತ್ತಿದ್ದು, ಇದರಿಂದ ದೇಶವು ಅಭಿವೃದ್ಧಿಯತ್ತಾ ಸಾಗುತ್ತಿದೆ. ಕುಟುಂಬದಲ್ಲಿ ಒಬ್ಬ ಮಹಿಳೆಯು ಕುಟುಂಬ ಒಂದು ಕಂಬ, ಕುಟುಂಬವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಭಲರಾಗಲು ಸಾಧ್ಯ ಎಂದರು.
ಪಿಎಸ್ಐ ರಮಾದೇವಿ, ಎಎಸ್ಐ ರವೀಂದ್ರ , ಜಿಲ್ಲಾ ನಿರ್ದೇಶಕ ಪದ್ಮಯ್ಯಗೌಡ, ಜಿಲ್ಲಾ ಜನಜಾಗೃತಿ ಮಾಜಿ ಅಧ್ಯಕ್ಷ ಲಕ್ಷ್ಮಣಗೌಡ, ಜ್ಞಾನ ವಿಕಾಸ ಯೋಜನಾಧಿಕಾರಿ ಸಂದ್ಯಾ, ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ಇತರರು ಇದ್ದರು.