ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆಯಲ್ಲಿ ‘ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ ಕುರಿತು ಕಾರ್ಯಗಾರ

ಕುಂದಾಪುರ: ಮಾ 27: ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆಯಲ್ಲಿ ‘ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ’ ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐ. ಎಂ. ಜೆ. ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊಫೆಸರ್ ದೋಮ ಚಂದ್ರಶೇಖರ್ ಅವರು ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. “ವೇಗವಾಗಿ ಬೆಳೆಯುತ್ತಿರುವ ಸ್ಪರ್ಧಾತ್ಮಕ ಪ್ರಪಂಚಕ್ಕೆ ವಿದ್ಯಾರ್ಥಿಗಳು ಅಣಿಯಾಗುತ್ತಿರುವ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಳ್ಳಬಹುದಾದ ವಿಷಯದ ಕುರಿತು ಮಾತನಾಡುತ್ತಾ, ಶಿಕ್ಷಣ, ಕೌಶಲ್ಯ ಮತ್ತು ಪ್ರಚಲಿತ ವಿದ್ಯಮಾನದ ಬಗ್ಗೆ ತಿಳಿಸಿದರು. ಜ್ಞಾನ, ಅರಿವು ಮತ್ತು ಆಸಕ್ತಿ ಆಧಾರಿತ ವಿಷಯದ ಕುರಿತು ವಿವರಣೆ ನೀಡಿದರು. ಜೀವನದಲ್ಲಿ ಶಿಕ್ಷಣ ಮತ್ತು ಕೌಶಲ್ಯದ ಬಗ್ಗೆ ಆಧುನಿಕ ಪ್ರಪಂಚದಲ್ಲಿ ನಡೆಯುತ್ತಿರುವ ವಿಚಾರವನ್ನು ಉದಾಹರಣೆಯೊಂದಿಗೆ ವಿವರಿಸಿದರು. ಕಾಲೇಜಿನಲ್ಲಿ ಪದವಿ ಜೊತೆಗೆ ನೀಡುತ್ತಿರುವ ಕೌಶಲ್ಯ ಮತ್ತು ಉದ್ಯೋಗ ಆಧಾರಿತ ತರಬೇತಿಯನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳುತ್ತಾ ಬದುಕನ್ನು ಉತ್ತಮ ರೀತಿಯಲ್ಲಿ ಕಟ್ಟಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ತಿಳಿ ಮಾತು ಹೇಳಿದರು.