ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಶಿಕ್ಷಣ ಸಂಸ್ಥೆಯ ಹತ್ತನೇ ತರಗತಿ ಮತ್ತು ಪಿ ಯು ಸಿ ವಿದ್ಯಾರ್ಥಿಗಳಿಗೆ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ನಾಸಿರ್ ಹುಸೇನ್ ಮತ್ತು ಶಂಭುಲಿಂಗಯ್ಯ ಇವರು ಮಾದಕ ವಸ್ತುಗಳ ಬಳಕೆ ಅದರಿಂದಾಗುವ ದುಷ್ಪರಿಣಾಮ, ಸಮಾಜದಲ್ಲಿ ಆಗುತ್ತಿರುವ ವಿವಿಧ ರೀತಿಯ ಮಾನಸಿಕ ಮತ್ತು ದೈಹಿಕ ಕಿರುಕುಳ, ಪೋಕ್ಸೋಕಾಯಿದೆ, ಮೊಬೈಲ್ ಅತಿಯಾದ ಬಳಕೆ, ಸೈಬರ್ ಕ್ರೈಂ ಮತ್ತು ಎಚ್ಚರ, ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗೃತೆ ಕುರಿತು ವಿವಿಧ ನಿದರ್ಶನಗಳ ಮೂಲಕ ಮಾಹಿತಿ ನೀಡಿ ಪೊಲೀಸ್ ಇಲಾಖೆಯಿಂದ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಸಂಪರ್ಕಿಸುವಂತೆ ತಿಳಿಸಿದರು. ಯುವ ಜನಾಂಗ ಯಾವುದೇ ಗೊಂದಲಕ್ಕೆ ಒಳಗಾಗದೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕುವಂತೆ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿದರು ಹಾಗೂ ಸಮಾಜದಲ್ಲಿ ಯುವ ಜನತೆ ಮಾದಕ ವ್ಯಸನಿಗಳಾಗುತ್ತಿರುವುದಕ್ಕೆ ವಿಷಾಧ ವ್ಯಕ್ತಪಡಿಸಿದರು
ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಉಪಪ್ರಾಂಶುಪಾಲರಾದ ಮಂಜುನಾಥ್ ಬಾಯರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕಿ ಅಕ್ಷತಾ ವಂದಿಸಿದರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.