ಶಿರ್ವ: ಪ್ರಸ್ತುತ ತಾಂತ್ರಿಕ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕಾರ್ಯಗಳು ಎಲ್ಲಾ ಕ್ಷೇತ್ರಗಳಲ್ಲಿ ಸುಲಭವಾಗಿ ನಡೆಯಲು ಮತ್ತು ಅತ್ಯಂತ ವೇಗವಾಗಿ ಪರಿಣಾಮಕಾರಿಯಾಗಿ ಮಾನವನ ಕೆಲಸವನ್ನು ಕಂಪ್ಯೂಟರ್ ಬಳಕೆಯಿಂದ ಸಾಗುತ್ತಿದೆ. ಇಂದಿನ ಯುವಕರಲ್ಲಿ ಕಲಿಕೆಯ ಜೊತೆಗೆ ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳುವ ಮೂಲಕ ಮುಂದೆ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಿಸಬಹು ದು. ಕಲಿಕೆಗೆ ವಯಸ್ಸು ಮುಖ್ಯ ಅಲ್ಲ ಮನಸು ಮುಖ್ಯ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಕಚೇರಿ ದ್ವಿತೀಯ ದರ್ಜೆಯ ಸಹಾಯಕಿ ಶ್ರೀಮತಿ ಜಾಕ್ಲೈನ್ ಮೆಂಡೋನ್ಸಾ ರವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ತಮ್ಮ ಅನುಭವವನ್ನು ವ್ಯಕ್ತಪಡಿಸಿದರು.
ಈ ದಿನದ ಪ್ರಯುಕ್ತ ಹಲವು ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ಮುಂದಿನ ಉದ್ಯೋಗ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿರಂತರ ಕಂಪ್ಯೂಟರ್ ಕಲಿಕೆಯನ್ನು ವಿದ್ಯಾರ್ಥಿಗಳು ಕಾಲೇಜು ಹಂತಗಳಲ್ಲಿ ಅಭ್ಯಾಸನವನ್ನು ಮಾಡಬೇಕೆಂದು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು.
ಶೈಕ್ಷಣಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಕಲಿಕೆ ಇಂದಿನ ದಿನ ಅತ್ಯಂತ ಪ್ರಮುಖವಾಗಿದೆ.ಇದರ ಪ್ರಯುಕ್ತ ಕಾಲೇಜಿನಲ್ಲಿ ವಿಭಾಗದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಬೇಸಿಕ್ ಮತ್ತು ಟ್ಯಾಲಿ ಕೋರ್ಸುಗಳ ತರಬೇತಿ ನೀಡಿ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಇದರ ಪ್ರಯೋಜನವನ್ನು ಪಡೆದುಕೊಂಡ ಮುಂದಿನ ಉದ್ಯೋಗ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಇಂಥ ಸರ್ಟಿಫಿಕೇಟ್ ಗಳು ವಿದ್ಯಾರ್ಥಿಗಳಿಗೆ ಸಹಾಯಕಾರಿ ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ಅವರು ಮಾತನಾಡಿದರು
ದ್ವಿತೀಯ ಬಿಎ ವಿದ್ಯಾರ್ಥಿ ಪವನ್ ಕುಮಾರ್ ತಮ್ಮ ಕಂಪ್ಯೂಟರ್ ಕಲಿಕೆಯ ಜ್ಞಾನದ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು .
ಪ್ರಥಮ ಬಿಸಿಎ ವಿದ್ಯಾರ್ಥಿ ಆದಿತ್ಯ ಶೆಟ್ಟಿಗಾರ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕಿ ಸಂಗೀತ ಪೂಜಾರಿ, ಪ್ರಿಯಾಂಕ, ಅಧ್ಯಾಪಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಕ್ ನಾಯಕ್ ಮತ್ತು ಅಲ್ಲಿಸ್ಟರ್ ಸುಜಾ ಡಿಸೋಜ ಕಾರ್ಯಕ್ರಮಕ್ಕೆ ಸಹಕರಿಸಿದರು. ಕಂಪ್ಯೂಟರ್ ಸಾಕ್ಷರತೆ ಕೋಶನ ಸಂಯೋಜಕಿ ಶ್ರೀಮತಿ ದಿವ್ಯಶ್ರೀ ರವರು ಸ್ವಾಗತಿಸಿ, ಕು. ಸೆಲ್ಮಾ ಪಿಂಟು ವಂದಿಸಿದರು. ಕು. ರಕ್ಷಾ ಮತ್ತು ಬಳಗ ಪ್ರಾರ್ಥಿಸಿ ಕು. ಶ್ರೇಯ ಸಫಲಿಗ ಕಾರ್ಯಕ್ರಮ ನಿರೂಪಿಸಿದರು