



ಕುಂದಾಪುರ : ವಿಶ್ವ ಕ್ಷಯರೋಗ ದಿನಾಚರಣೆಯ ಅಂಗವಾಗಿ, ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ದಲ್ಲಿ ನಡೆದ ಕಾರ್ಯ ಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ ಇವರು ಉದ್ಘಾಟಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆಯು ಅತೀ ಹೆಚ್ಚು ಟಿ. ಬಿ. ರೋಗಿಗಳನ್ನು ದತ್ತು ಪಡೆದುದಕ್ಕಾಗಿ ಸನ್ಮಾನಿಸಲಾಯಿತು. ರೆಡ್ ಕ್ರಾಸ್ ಕುಂದಾಪುರ ಘಟಕ ಇಪ್ಪತ್ತೈದು ಕ್ಷಯ ರೋಗಿಗಳನ್ನು ಆರು ತಿಂಗಳ ಕಾಲ ದತ್ತು ಪಡೆದಿದೆ. ಈ ಸನ್ಮಾನವನ್ನು ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಸ್ವೀಕರಿದರು. ಕಾರ್ಯಕ್ರಮ ದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ರಾಮ, ಟಿ.ಬಿ. ನಿರ್ಮೂಲನ ಅಧಿಕಾರಿಗಳಾದ ಚಿದಾನಂದ ಸಂಜು ನರ್ಸಿಂಗ್ ಕಾಲೇಜು ಪ್ರಾಂಶುಪಾಲರು ಉಪಸ್ಥಿತರಿದ್ದರು.