ಕುಂದಾಪುರ: ಸಂತ ಮೇರಿಯ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಶ್ವ ಯೋಗ ದಿನಾಚರಣೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅತಿಥಿಯಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ, ಇವರು ವಿದ್ಯಾರ್ಥಿಗಳಿಗೆ ಯೋಗದ ಮೂಲಕ ನಮ್ಮ ದೇಹದಲ್ಲಿರುವ ನಕಾರಾತಮಕ ಶಕ್ತಿಯನ್ನು ಹೊರಹಾಕಬಹುದು ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಬಹುದು ಎಂಬ ಮಾಹಿತಿ ನೀಡಿದರು.
ಇನ್ನೋರ್ವ ಅತಿಥಿ ಶಾಲಾ ಹಳೆ ವಿದ್ಯಾರ್ಥಿ ಶ್ರೀ ರಾಮಕೃಷ್ಣ ಆಸ್ಪತ್ರೆಯ ವೈದ್ಯಾದಿಕಾರಿ ಡಾ. ಸೋನಿ ಡಿಕೋಸ್ತಾ ಇವರು ಉತ್ತಮ ಆಹಾರ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ನಮ್ಮ ದೇಹ, ಆತ್ಮ, ಮನಸನ್ನು ಹತೋಟಿಯಲ್ಲಿರಿಸಿಕೊಳ್ಳಲು ಯೋಗವನ್ನು ಮಾಡಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ ಶೆಟ್ಟಿ ಇವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶಾಂತಿ ರಾಣಿ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿಸಿದರು. ಕುಮಾರಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನ್ನಿ ಕ್ರಾಸ್ತಾ ಇವರು ವಂದಿಸಿದರು. ಶಿಕ್ಷಕಿ ಯರಾದ ಗೀತಾ ನೊರೊನ್ನ, ಜ್ಯೋ ತಿ ಡಿಸಿಲ್ವ, ಶ್ರೀಮತಿ, ಸುರೇಖಾ ಮತ್ತು ಆಶಾ ಸಹಕರಿಸಿದರು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಶಾಲಾ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ವಿತರಿಸಲಾಯಿತು.