

ಕುಂದಾಪುರ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೋಡಿ ಸಮುದ್ರ ತೀರದ ಸೀ ವಾಕ್ ನಲ್ಲಿ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀರಾಮ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಈ ಯೋಗ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.
