ಯುವಕ ಯುವತಿಯರು ಸ್ವಯಂ ಪ್ರೇರಣೆಯಿಂದ ಜಾತಿ, ಮತ ಭೇದವಿಲ್ಲದೆ ಅಗತ್ಯ ಇರುವವರಿಗೆ ರಕ್ತ ನೀಡಬೇಕು:ಎಲ್.ಗೋಪಾಲಕೃಷ್ಣ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಯುವಕ ಯುವತಿಯರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು. ಜಾತಿ, ಮತ ಭೇದವಿಲ್ಲದೆ ಅಗತ್ಯ ಇರುವವರಿಗೆ ರಕ್ತ ನೀಡಬೇಕು ಎಂದು ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಹೇಳಿದರು.
ತಾಲ್ಲೂಕಿನ ದಳಸನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಕಾರ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋಲಾರದ ಎಸ್‍ಎನ್‍ಆರ್ ಆಸ್ಪತ್ರೆ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಗತ್ಯ ಪ್ರಮಾಣದ ರಕ್ತ ಸಿಗದಿರುವ ಪರಿಣಾಮವಾಗಿ, ರಕ್ತದ ಅಗತ್ಯವಿರುವ ಎಷ್ಟೋ ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಮಾತನಾಡಿ, ಮಾನವೀಯ ನೆಲೆಯಲ್ಲಿ ರಕ್ತದಾನಕ್ಕಿಂತ ಮಿಗಿಲಾದ ದಾನ ಇನ್ನೊಂದಿಲ್ಲ ಎಂದು ಹೇಳಿದರು.
ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಫೌಜಿಯಾ ಖಾನಂ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಮ್ಮ, ಸದಸ್ಯರಾದ ಉಮಾದೇವಿ, ಜಗದೀಶ್, ವಿಶ್ವನಾಥರೆಡ್ಡಿ, ರಿಹಾನ್ ತಾಜ್, ಶೋಭಾ ಷರೀನ್, ಶ್ರೀನಿವಾಸಮೂರ್ತಿ, ಆರೋಗ್ಯ ನಿರೀಕ್ಷಕ ಅನಿಲ್ ಹಾಜರಿದ್ದರು.