

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಮಧ್ಯಪ್ರದೇಶದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಸ್ಕೇಟಿಂಗ್ ನಲ್ಲಿ 500 ಮೀ ರಿಂಕ್ ಓಟದಲ್ಲಿ ಮತ್ತು 2000 ಮೀ ರಸ್ತೆ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಅಪೂರ್ವ ಸಾಧನೆಗೈದಿದ್ದಾರೆ.
ಸಂಸ್ಥೆಯ ಪ್ರಾಂಶುಪಾಲರಾದ ವಂ.ಫಾ.ರೋಹನ್ ಡಿ ಅಲ್ಮೇಡ ಅವರು ಯುವರಾಜ್ ಅವರ ಈ ಅದ್ಭುತ ಸಾಧನೆಗಾಗಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದ ಪರವಾಗಿ ಅಭಿನಂದಿಸಿ, ಮುಂದಿನ ದಿನಗಳಿಗೂ ಇದೇ ರೀತಿಯ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ.
Yuvaraj Wins Two Gold Medals at National Skating Meet
Yuvaraj D. Kunder of Class VIII, a student of St Aloysius Gonzaga School, won two Gold Medals at the 69th National School Games Skating Competition (SGFI) held in Madhya Pradesh. He secured first place in the 500 m Rink Race and the 2000 m Road Race.
The school community congratulated Yuvaraj on his outstanding performance and wished him continued success in his sporting journey.

