

ಮಂಗಳೂರು: ಉಡುಪಿ ಜಿಲ್ಲೆಯ ಚಾಲೆಂಜರ್ಸ್ ಅಥ್ಲೆಟಿಕ್ಸ್ ಕ್ಲಬ್ ವತಿಯಿಂದ ಜೂನ್ 7ರಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಮಳೆಗಾಲದ ಕ್ರಾಸ್ ಕಂಟ್ರಿ ಹಾಗೂ ಕಿಡ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 9ನೇ ಬಿ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ನಾಲ್ಕು ಚಿನ್ನದ ಪದಕಗಳನ್ನು ಗೆದ್ದು ಗಮನ ಸೆಳೆದಿದ್ದಾರೆ.
ಯುವರಾಜ್ ಅವರು 80 ಮೀಟರ್, 200 ಮೀಟರ್, 4×100 ಮೀಟರ್ ರಿಲೇ ಹಾಗೂ 4×100 ಮೀಟರ್ ಮಿಕ್ಸ್ಡ್ ರಿಲೇ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಒಟ್ಟು ನಾಲ್ಕು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ, ಕ್ರೀಡಾಕೂಟದ ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ವೈಯಕ್ತಿಕ ಚಾಂಪಿಯನ್ಶಿಪ್ ಟ್ರೋಫಿಯನ್ನೂ ಪಡೆದಿದ್ದಾರೆ.
ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿರುವ ಯುವರಾಜ್ ಅವರ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರಾದ ವಂ. ರೆ.ಫಾ. ರೋಹನ್ ಡಿ ಅಲ್ಮೇಡ ಎಸ್. ಜೆ ಅವರು ಯುವರಾಜ್ ಅವರ ಈ ಅದ್ಭುತ ಸಾಧನೆಗಾಗಿ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದ ಪರವಾಗಿ ಅಭಿನಂದಿಸಿ ಮುಂದಿನ ದಿನಗಳಿಗೂ ಇದೇ ರೀತಿಯ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ.

