ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

 

ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ 

 

 

 

 

ಕೋಲಾರ,ಜೂ.9: ಇದೇ ತಿಂಗಳು 25 ರಂದು ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣಾ ಕಾರ್ಯಕ್ರಮವನ್ನು ಜೂ, 10ರ ಬುಧವಾರ ಬೆಳಗ್ಗೆ 10-30 ಗಂಟೆಗೆ ತಾಲೂಕಿನ ನಡುಪಳ್ಳಿ ಗ್ರಾಮದ ಜ್ಞಾನಬೋಧ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ರತ್ನಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಗೌಡ, ಜಿಲ್ಲಾ ಪಂಚಾಯತಿ ಅಧ್ಯಕ್ಷ ಸಿ.ಎಸ್ ವೆಂಕಟೇಶ್ ಹಾಗೂ ಕ್ಯಾಮ್ಸ್ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಕ್ಯಾಮ್ಸ್‍ನ ಜಿಲ್ಲಾಧ್ಯಕ್ಷ ಎ.ಸದಾನಂದ ತಿಳಿಸಿದ್ದಾರೆ.