ವರದಿ: ಸ್ಟೀವನ್ ಕುಲಾಸೊ
ಐಸಿವೈಎಂ ಉದ್ಯಾವರ : ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ : ಉದ್ಯಾವರದ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ವ್ಯಾಪ್ತಿಗೆ ಒಳಪಟ್ಟ ಭಾರತೀಯ ಕಥೋಲಿಕ್ ಯುವ ಸಂಚಲನ ಐಸಿವೈಎಂ ಯುವ ಸಂಘಟನೆಯೂ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಜನವರಿ 19 ರಂದು ಸುವರ್ಣ ಮಹೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಉಡುಪಿ ಮದರ್ ಆಫ್ ಸಾರೋಸ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾ. ವಲೇರಿಯನ್ ಮೆಂಡೋನ್ಸಾ, ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕುಲಪತಿ , ಐಸಿವೈಎಂ ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾ. ಸ್ಟ್ಯಾನಿ ಬಿ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೋರನ್ನ, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಮೈಕಲ್ ಡಿಸೋಜ, ಕಾರ್ಯದರ್ಶಿ ಡೋರಾ ಅರೋಜ, ಕೋಶಾಧಿಕಾರಿ ರೋಶನ್ ಕ್ರಾಸ್ತಾ, ಐಸಿವೈಎಂ ಅಧ್ಯಕ್ಷ ರೊಯಲ್ ಕಾಸ್ತೆಲಿನೋ, ಕಾರ್ಯದರ್ಶಿ ಪ್ರಿಯಾಂಕಾ ಉಪಸ್ಥಿತರಿದ್ದರು. ಕಾರ್ಯಕ್ರಮಗಳ ಸಂಚಾಲಕ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮವನ್ನು ನಿರೂಪಿಸಿದರು.
ಸುವರ್ಣ ಮಹೋತ್ಸವವನ್ನು ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವಾ ಉದ್ಘಾಟಿಸಲಿದ್ದಾರೆ. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ದೇವಾಲಯದ ಪ್ರಧಾನ ಧರ್ಮಗುರು ವಂದನೀಯ ಫಾ. ವಲೇರಿಯನ್ ಮೆಂಡೋನ್ಸಾ, ಸ್ಥಾಪಕ ನಿರ್ದೇಶಕ ವಂದನೀಯ ಫಾ. ಹೆನ್ರಿ ಫೆರ್ನಾಂಡಿಸ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಐಸಿವೈಎಂ ರಾಜ್ಯ ಮುಖಂಡರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಐಸಿವೈಎಂ ಸುವರ್ಣ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.