ಕುಂದಾಪುರ ವ್ರತ್ತ ಮಟ್ಟದ ಹುಡುಗಿಯರ ತ್ರೋ ಬಾಲ್ ಪಂದ್ಯಾಟದಲ್ಲಿ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ ಸ್ಥಾನ

JANANUDI NETWORK

ಕುಂದಾಪುರ ವ್ರತ್ತ ಮಟ್ಟದ ಹುಡುಗಿಯರ ತ್ರೋ ಬಾಲ್ ಪಂದ್ಯಾಟದಲ್ಲಿ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ ಸ್ಥಾನ


ಕುಂದಾಪುರ, ಜು.30: ಕುಂದಾಪುರ ವ್ರತ್ತ ಮಟ್ಟದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಗಳಿಗಾಗಿ ನಡೆದ ತ್ರೋ ಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆಯಿತು.
ಗಂಗೊಳ್ಳಿ ಚರ್ಚ್ ಆಡಳಿತದ ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ, ಗಂಗೊಳ್ಳಿ ತೌಹಿದ್ ಶಾಲೆಯ ಮೈದಾನದಲ್ಲಿ ನಡೆದ ಪಂದ್ಯಾಟವನ್ನು ಗಂಗೊಳ್ಳಿ ಇಗರ್ಜಿಯ ಧರ್ಮಗುರು ಆಲ್ಬರ್ಟ್ ಕ್ರಾಸ್ತಾ ಉದ್ಘಾಟಿಸಿ ಶುಭ ನುಡಿದರು. ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಝೀಟಾ ಕರ್ವಾಲ್ಲೊ, ಶಾಲಾ ಆಡಳಿತ ಮಂಡಳಿಯ ಸದಸ್ಯ ಜೋನ್ ಲೋಬೊ ಮತ್ತಿತರು ಉಪಸ್ಥಿತರಿದ್ದರು.


        ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ,  ಮುಖ್ಯೋಪಾಧ್ಯಾಯಿನಿ ಡೋರಾ ಸುವಾರಿಸ್ ತಂಡಕ್ಕೆ ಅಭಿನಂದಿಸಿದ್ದಾರೆ. ದೈಹಿಕ ಶಿಕ್ಷಕಿ ಶಾಂತಿ ರಾಣಿ ಬಾರೆಟ್ಟೊ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದ್ದರು.