ಕುಂದಾಪುರ ಸರಕಾರಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 14 ಮಂದಿ ಕೊರೋನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

JANANUDI.COM NETWORK

 

 

ಕುಂದಾಪುರ ಸರಕಾರಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 14 ಮಂದಿ ಕೊರೋನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ 

 

 

 

 

ಕುಂದಾಪುರ: ಮೇ.31 ಕುಂದಾಪುರ ಸರಕಾರಿ ಕೋವಿಡ್-19 ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರಾದ 14 ಮಂದಿ ಚಿಕಿತ್ಸೆ ಪಡೆದು ಗುಣಮುಖರಾದ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಸರಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸಂಬಂಧಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮರಳುತ್ತಿರುವ ಹೊಸ ಅಧ್ಯಾಯಕ್ಕೆ ಇಂದು ಭಾನುವಾರ ಕುಂದಾಪುರದ ಕೋವಿಡ್ ಆಸ್ಪತ್ರೆಯಲ್ಲಿ ನಾಂದಿಯಾದರು..

ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ, ಕೋವಿಡ್ ನೋಡಲ್ ಅಧಿಕಾರಿ ಡಾ| ಪ್ರಶಾಂತ್ ಭಟ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರಾರ್ಬಟ್ ರೆಬೆಲ್ಲೊ, ಪಿಜಿಶಿಯನ್ ಡಾ. ನಾಗೇಶ್, ಬೈಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಕುಂದಾಪುರ ಪಿಎಸ್ಐ ಹರೀಶ್ ಆರ್. ಮೊದಲಾದವರು ಉಪಸ್ಥಿತಿಯಿದ್ದು  ಕೋವಿಡ್ ಆಸ್ಪತೆಯಲ್ಲಿ ಚಿಕಿತ್ಸೆ ಪಡೆದು ಕೊರೋನಗುಣ ಮುಕ್ತರಾದವರಿಗೆ ಗುಲಾಬಿ ಗಿಡಗಳನ್ನು ವಿತರಿಸಿದರು

   ಹಾಗೇ  ಮಕ್ಕಳಿಗೆ ಚಾಕಲೇಟ್ ನೀಡುವ ಮೂಲಕ ವಿಶೇಷ ರೀತಿಯಲ್ಲಿ ಬೀಳ್ಕೋದುಗೆಯನ್ನು ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ  ಕುಂದಾಪುರ ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯರು, ಶುಶ್ರೂಷಕಿಯರು, ಸಿಬ್ಬಂದಿಗಳು ಹಾಜರಿದ್ದರು

    ಪ್ರಸ್ತುತ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು 78 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಏಳನೆ ದಿನಕ್ಕೆ 3 ವರ್ಷ, 8 ವರ್ಷ ಮತ್ತು 14ವರ್ಷದ ಮಕ್ಕಳು ಸಹಿತ 55 ವರ್ಷದವರೆಗಿನ ಒಟ್ಟು 14 ಮಂದಿಯ ಗಂಟಲು ದ್ರವದ  ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿಯ ಪ್ರಕಾರ  ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

    ಇವರಲ್ಲಿ ಬಹುತೇಕ ಮಂದಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸಿದವರಗಿದ್ದು ಕೆಲವರು ತೆಲಂಗಾಣದಿಂದ ಬಂದವರಾಗಿದ್ದು ಸೋಂಕಿನ ಯಾವುದೇ ಲಕ್ಷ್ಮಣಗಳಿಲ್ಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.