ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು,ಹಂಪಲು ವಿತರಣೆ-ವಿಶೇಷ ಪೂಜೆ

 

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬ
ಜಿಲ್ಲಾಸ್ಪತ್ರೆಯಲ್ಲಿ ಹಣ್ಣು,ಹಂಪಲು ವಿತರಣೆ-ವಿಶೇಷ ಪೂಜೆ

 

 

ಕೋಲಾರ:- ರೈತರ ಹಿತ ರಕ್ಷಣೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಮಾತ್ರ ಸಾಧ್ಯ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ ತಿಳಿಸಿದರು.
ಕುಮಾರಸ್ವಾಮಿ ಅವರ 60ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಎಸ್‍ಎನ್‍ಆರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಅವರು ಮಾತನಾಡುತ್ತಿದ್ದರು.
ರೈತರ ಸಾಲ ಮನ್ನಾದಂತಹ ತೀರ್ಮಾನವನ್ನು ಕೈಗೊಳ್ಳಲು ಕುಮಾರಸ್ವಾಮಿ ಅವರಿಂದ ಮಾತ್ರ ಸಾಧ್ಯವಾಗಿದೆ ಎಂದ ಅವರು, ಸದಾ ರೈತರ ಒಳಿತಿಗಾಗಿಯೇ ಚಿಂತಿಸುವ ಅವರಿಗೆ ದೇವರು ಆಯಸ್ಸು,ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿದರು.
ಸದಾ ರೈತರ ಬಗ್ಗೆಯೇ ಚಿಂತಿಸುವ ಏಕೈಕ ನಾಯಕ ಕುಮಾರಸ್ವಾಮಿ ಎಂದ ಅವರು, ಅನಾರೋಗ್ಯದ ನಡುವೆಯೂ ಪಕ್ಷದ ಸಂಘಟನೆ ಹಾಗೂ ರಾಜ್ಯದ ಜನರ ಹಿತಕ್ಕಾಗಿ ದುಡಿಯುವ ಅವರು ಕಾರ್ಯಕರ್ತರಿಗೆ ಆದರ್ಶವಾಗಿದ್ದಾರೆ ಎಂದರು.
ರಾಜೇಶ್ವರಿ,ಹರೀಶ್‍ಗೌಡ ಕುಟುಂಬದವರು ಕಳೆದ ನಾಲ್ಕೈದು ವರ್ಷಗಳಿಂದ ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಅವರೇ ಸಂಘಟಿಸುತ್ತಿದ್ದು, ಅವರಿಗೆ ಧನ್ಯವಾದ ಸಲ್ಲಿಸಿದರು.
ಜೆಡಿಎಸ್ ಮಹಿಳಾ ಘಟಕದ ಕುರ್ಕಿ ರಾಜೇಶ್ವರಿ, ಹುಟ್ಟುಹಬ್ಬದ ಅಂಗವಾಗಿ ನಗರದ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕೇಕ್ ಕತ್ತರಿಸಿ, ಕುಮಾರಣ್ಣನವರ ಜನಪರ ಕಾಳಜಿಗೆ ಯಾರು ಸಮನಾಗಲಾರರು ಎಂದರು.
ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ, ಪಕ್ಷವನ್ನು ಪ್ರತಿಯೊಬ್ಬ ಕಾರ್ಯಕರ್ತರು ಸಂಘಟಿಸುವ ಸಂಕಲ್ಪವನ್ನು ಮಾಡುವ ಮೂಲಕ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಕೊಡುಗೆ ನೀಡೋಣ ಎಂದರು.
ಹುಟ್ಟುಹಬ್ಬದ ಅಂಗವಾಗಿ ನಡೆದ ವಿಶೇಷ ಪೂಜೆಯಲ್ಲಿ ಜೆಡಿಎಸ್ ಮುಖಡರಾದ ಎಪಿಎಂಸಿ ಅಧ್ಯಕ್ಷ ವಡಗೂರು ನಾಗರಾಜ್, ರಾಮರಾಜು, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಮುರಾಂಡಹಳ್ಳಿ ಗೋಪಾಲಪ್ಪ, ಶ್ರೀಕೃಷ್ಣ, ಬಣಕನಹಳ್ಳಿ ನಟರಾಜ್,ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಾಬು ಮೌನಿ, ಚೆನ್ನವೀರಯ್ಯ, ನಾಗೇಶ್, ನರೇಶ್, ಶ್ರೀನಾಥ್ ಮತ್ತಿತರರು ಪಾಲ್ಗೊಂಡಿದ್ದರು.