ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ ; ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್
ಶ್ರೀನಿವಾಸಪುರ: ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತ ಉಪ ತಹಶೀಲ್ದಾರ್ ಎನ್.ಆರ್.ನರೇಶ್ ಅವರನ್ನು ಸನ್ಮಾನಿಸಿ ಮಾತನಾಡಿ, ಸರ್ಕಾರಿ ನೌಕರರು ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನರೇಶ್ ಅವರು ತಮ್ಮ ಸೇವಾವಧಿಯಲ್ಲಿ ಜನಮುಖಿಯಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಮಾದರಿಯನ್ನು ಇತರರೂ ಅನುಸರಿಸಿದಲ್ಲಿ ಜನ ಮನ್ನಣೆ ದೊರೆಯುತ್ತದೆ ಎಂದು ಹೇಳಿದರು.
ನಿವೃತ್ತ ಉಪ ತಹಶೀಲ್ದಾರ್ ಎನ್.ಆರ್.ನರೇಶ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಸೇವಾವಧಿಯಲ್ಲಿ ತಮಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.
ಉಪ ತಹಶೀಲ್ದಾರರಾದ ಬಿ.ಆರ್.ಮುನಿವೆಂಕಟಪ್ಪ, ಮಲ್ಲೇಶ್, ಮಾಲಿನಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಕೆ.ಎನ್.ಹರೀಶ್ ಬಾಬು, ಗುರುರಾಜರಾವ್, ಭಾಸ್ಕರ್, ನಾರಾಯಣರೆಡ್ಡಿ ಇದ್ದರು.