ಜುಲಾಯ್ 12 ರಿಂದ 16 ರ ತನಕ ಕರ್ನಾಟಕದಲ್ಲಿ ಭಾರಿ ಮಳೆ

JANANUDI.COM NETWORK

 

ಜುಲಾಯ್ 12 ರಿಂದ 16 ರ ತನಕ ಕರ್ನಾಟಕದಲ್ಲಿ ಭಾರಿ ಮಳೆ

 

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 12 ರಿಂದ 16ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಭಾನುವಾರದಿಂದ ಮಂಗಳವಾರದ ತನಕ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.