ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನಾಚರಣೆ

ವರದಿ: ವಾಲ್ಟರ್ ಮೊಂತೇರೊ

 

 

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :
ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನಾಚರಣೆ

 

 

ನೆಹರೂ ಯುವ ಕೇಂದ್ರ ಉಡುಪಿ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಜೇಸಿಐ ಬೆಳ್ಮಣ್ಣು ಸಹಯೋಗದಲ್ಲಿ ಆದಿತ್ಯವಾರ ಅಬ್ಬನಡ್ಕ ಸಂಘದ ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಪ್ರಧಾನ ಭಾಷಣಕಾರರಾದ ಭಾರತೀಯ ಜೇಸಿಐನ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಕೆ. ದೀಪ ಬೆಳಗಿಸಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಮಾತನಾಡಿದವರು ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತು ನಿಮ್ಮದಾಗುತ್ತದೆ ಎಂದು ಕರೆ ನೀಡಿದವರು ಸ್ವಾಮಿ ವಿವೇಕಾನಂದ. ಯುವಕರಾಗಿದ್ದಾಗಲೇ ಸನ್ಯಾಸತ್ವ ಸ್ವೀಕಾರ ಮಾಡಿ ಧರ್ಮ ಪ್ರಚಾರಕ್ಕೆ ಧುಮುಕಿದ ವಿವೇಕಾನಂದರು ಯುವಜನರಿಗೆ ಸ್ಪೂರ್ತಿ. ನರೇಂದ್ರ ಎಂಬ ಯುವಕ ವಿವೇಕಾನಂದನಾದ ಎಂಬುದರ ಕುರಿತು ಸವಿಸ್ತಾರವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ವಹಿಸಿದ್ದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯಕ್ರಮದ ನಿರ್ದೇಶಕ ಕಾಸ್ರಬೈಲು ಸುರೇಶ್ ಪೂಜಾರಿ, ನಿಕಟ ಪೂರ್ವಾಧ್ಯಕ್ಷ ರಾಜೇಶ್ ಕೋಟ್ಯಾನ್, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಪೂರ್ವಾಧ್ಯಕ್ಷ ರಘುವೀರ್ ಶೆಟ್ಟಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷ ಬಾಲಕೃಷ್ಣ ಮಡಿವಾಳ, ಕೋಶಾಧಿಕಾರಿ ಲೀಲಾ ಪೂಜಾರಿ, ಸದಸ್ಯರಾದ ಲಲಿತಾ ಆಚಾರ್ಯ, ಆರತಿ ಕುಮಾರಿ, ಅಶ್ವಿನಿ ಪೂಜಾರಿ, ಧನಂಜಯ ಕುಲಾಲ್, ಪುಷ್ಪ ಕುಲಾಲ್, ಪದ್ಮಶ್ರೀ ಪೂಜಾರಿ, ಶರತ್ ದೇವಾಡಿಗ, ಸುಲೋಚನಾ ಕೋಟ್ಯಾನ್, ಸುನಿಲ್ ಕುಲಾಲ್, ಸುರೇಶ್ ದೇವಾಡಿಗ ಮೊದಲಾದವರಿದ್ದರು.