ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಪುಲ್ವಾಮಾ ಹುತಾತ್ಮ ವೀರ ಯೋಧರಿಗೆ ನಮನ

ವರದಿ: ವಾಲ್ಟರ್ ಮೊಂತೇರೊ

 

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಪುಲ್ವಾಮಾ ಹುತಾತ್ಮ ವೀರ ಯೋಧರಿಗೆ ನಮನ

 

 

ನೆಹರೂ ಯುವ ಕೇಂದ್ರ ಉಡುಪಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ವತಿಯಿಂದ ಸಂಘದ ರಂಗಮಂದಿರದಲ್ಲಿ ಕಳೆದ ವರ್ಷ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸುವ ಮೂಲಕ ದೇಶ ಪ್ರೇಮಿಗಳ ದಿನಾಚರಣೆ ಆಚರಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ಪುಲ್ಮಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಕಳೆದ ಒಂದು ವರ್ಷದ ಹಿಂದೆ ಉಗ್ರರು ನಡೆಸಿದ ದಾಳಿಯಿಂದ ಹುತಾತ್ಮರಾದ 44 ವೀರ ಯೋಧರಿಗೆ ನುಡಿ ನಮನ ಸಲ್ಲಿಸಲಾಯಿತು. ಹುತಾತ್ಮರ ಆತ್ಮಕ್ಕೆ ಶಾಂತಿಕೋರಿ ಮೌನಾಚರಣೆ ಮಾಡಲಾಯಿತು. ಹುತಾತ್ಮ ಸೈನಿಕರಿಗೆ ಭಾರತ ಮಾತೆ ಎದುರು ಮೊಂಬತ್ತಿ ಬೆಳಗಿಸಿ ಸಂತಾಪ ಸೂಚಿಸಲಾಯಿತು.

ಸೈನಿಕರ ಕುಟುಂಬಗಳ ಮೇಲೆ ಸಹಾನುಭೂತಿ, ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಗಳು ದೇಶದ ಜನತೆಯಿಂದಾಗಬೇಕು ಎಂದು ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ವೀರ ಯೋಧರ ನುಡಿ ನಮನದಲ್ಲಿ ಮಾತಾನಾಡಿದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, , ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಬೀರೊಟ್ಟು ದಿನೇಶ್ ಪೂಜಾರಿ, ಕಾಸ್ರಬೈಲು ಸುರೇಶ್ ಪೂಜಾರಿ, ಜೊತೆ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಅಬ್ಬನಡ್ಕ ಸುರೇಶ್ ಪೂಜಾರಿ, ಸುನೀತಾ ಪಿಂಟೋ ಮೊದಲಾದವರಿದ್ದರು.