ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವಿಶ್ವ ಮಹಿಳಾ ದಿನಾಚರಣೆ, ಸನ್ಮಾನ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವಿಶ್ವ ಮಹಿಳಾ ದಿನಾಚರಣೆ, ಸನ್ಮಾನ

ಸಮಾಜದಲ್ಲಿ ಪುರುಷರಷ್ಟೇ ಸ್ತ್ರೀ ಕೂಡ ಸಮಾನಳಾಗಿದ್ದು ಹೆಣ್ಣು ಈ ಸಮಾಜದ ಕಣ್ಣಾಗಿದ್ದಾಳೆ ಹೆಣ್ಣು ಇವತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಗಣನೀಯ ಸಾಧನೆಯನ್ನು ಮಾಡುತ್ತಿದ್ದಾಳೆ ಎಂದು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಹೇಳಿದರು.
ಅವರು ಶುಕ್ರವಾರ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ವತಿಯಿಂದ ಸಂಘದ ರಂಗಮಂದಿರದಲ್ಲಿ ಜರಗಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಪರಿಸರದಲ್ಲಿ ಉತ್ತಮ ಸೇವೆ ನೀಡುತ್ತಾ ತಾಲೂಕು ಮತ್ತು ಜಿಲ್ಲಾ ಉತ್ತಮ ಆಶಾ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕøತೆ ಬೆಳ್ಮಣ್ಣು ಸುನೀತಾ ಮರಿಯಾನ್ ಪಿಂಟೋರವರನ್ನು ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಮಹಿಳಾ ವಿಭಾಗದ ಸದಸ್ಯರಾದ ಪುಷ್ಪ ಕುಲಾಲ್, ಹರಿಣಾಕ್ಷಿ ಪೂಜಾರಿ, ಪದ್ಮಶ್ರೀ ಪೂಜಾರಿ, ಅಶ್ವಿನಿ ಪ್ರಭಾಕರ್, ಆರತಿ ಕುಮಾರಿ, ವೀಣಾ ಪೂಜಾರಿ, ಮಮತಾ ಪ್ರಕಾಶ್, ಅಶ್ವಿನಿ ಪ್ರಶಾಂತ್ ಪೂಜಾರಿ, ಗೀತಾ ಕುಲಾಲ್, ಪ್ರೇಮಾ ಪೂಜಾರಿ ಮೊದಲಾದವರಿದ್ದರು.
ಮಹಿಳಾ ವಿಭಾಗದ ಲಲಿತಾ ಆಚಾರ್ಯರವರು ಸ್ವಾಗತಿಸಿದರು, ಬೋಳ ಹರಿಣಿ ಪೂಜಾರಿಯವರು ಸನ್ಮಾನಿತರ ಪರಿಚಯ ವಾಚಿಸಿದರು, ಲೀಲಾ ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿದರು, ಸುಲೋಚನ ಕೋಟ್ಯಾನ್‍ರವರು ವಂದಿಸಿದರು.