ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಂತರಾಷ್ಟ್ರೀಯ ಅರಣ್ಯ ದಿನಾಚರಣೆ

ವರದಿ:ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಂತರಾಷ್ಟ್ರೀಯ ಅರಣ್ಯ ದಿನಾಚರಣೆ


ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ಸಂಘದ ಬಳಿ ಬೆಲೆ ಬಾಳುವ ಗಿಡಗಳನ್ನು ಹಸ್ತಾಂತರಿಸುವ ಮೂಲಕ ಅಂತರಾಷ್ಟ್ರೀಯ ಅರಣ್ಯ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಸಂಘದ ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ ಮಾತನಾಡಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಉತ್ತಮ ಪರಿಸರ ಹಾಗೂ ಮಳೆಗಾಗಿ ನಾವು ಗಿಡ ಮರಗಳನ್ನು ಹೆಚ್ಚು ಬೆಳೆಸಬೇಕು. ಶಾಲಾ ಮಕ್ಕಳಿಗೆ ಈ ಕುರಿತು ಪಠ್ಯಕ್ರವiದಲ್ಲಿ ಹೆಚ್ಚಿನ ಒತ್ತು ನೀಡಿ ಅರಿವು ಮೂಡಿಸಬೇಕು. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡಿದರೆ ಪ್ರಕೃತಿಯು ತನ್ಮೂಲಕ ಭಾರೀ ನಷ್ಟವನ್ನು ವನುಕುಲಕ್ಕೆ ಮತ್ತು ಸಕಲ ಜೀವ ಜಲಚರಗಳಿಗೆ ನೀಡುತ್ತದೆ ಎಂಬುದನ್ನು ಮರೆಯಬಾರದು. ಮನುಷ್ಯ ಮಾಡಿದ ತಪ್ಪಿನಿಂದಾಗಿ ಇಂದು ಪ್ರಕೃತಿ ನಾಶವಾಗಿ ಪ್ರಾಣಿ ಪಕ್ಷಿಗಳು ಸೂಕ್ತ ಪರಿಸರ ಇಲ್ಲದೇ ಪರಿತಪಿಸುವಂತೆ ಆಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷರಾದ ಸಂದೀಪ್ ವಿ. ಪೂಜಾರಿ, ಉಪಾಧ್ಯಕ್ಷರಾದ ಹರೀಶ್ ಪೂಜಾರಿ, ಸದಸ್ಯರಾದ ಅಬ್ಬನಡ್ಕ ಸತೀಶ್ ಪೂಜಾರಿ, ಬಾಲಕೃಷ್ಣ ಮಡಿವಾಳ, ಲಲಿತಾ ಆಚಾರ್ಯ, ಹರಿಣಾಕ್ಷಿ ಪೂಜಾರಿ, ಸುಲೋಚನಾ ಕೋಟ್ಯಾನ್, ವೀಣಾ ಪೂಜಾರಿ, ಪುಷ್ಪ ಕುಲಾಲ್, ಆರತಿ ಕುಮಾರಿ ಮೊದಲಾದವರು ಉಪಸ್ಥಿತಿತರಿದ್ದರು.