ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಅಭಿಯಾನ

ವರದಿ:ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಅಭಿಯಾನ


ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದ ಬಳಿ ಸ್ವಚ್ಛತಾ ಅಭಿಯಾನ & ಶ್ರಮದಾನ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್‍ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಸುರೇಶ್ ಪೂಜಾರಿ ಕಾಸ್ರಬೈಲು, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷರಾದ ಹರೀಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಲೀಲಾ ಪೂಜಾರಿ, ಹರಿಣಾಕ್ಷಿ ಪೂಜಾರಿ, ಪ್ರೇಮಾ ಪೂಜಾರಿ, ಸುನೀತಾ ಪಿಂಟೋ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಆರತಿ ಕುಮಾರಿ, ಸುನಿಲ್ ಕುಲಾಲ್ ಮೊದಲಾದವರು ಉಪಸ್ಥಿತಿತರಿದ್ದರು.