ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಂಚೆ ಚೀಟಿ ಮತ್ತು ಹಳೆಯ ಕಾಲದ ನಾಣ್ಯಗಳ ಪ್ರದರ್ಶನ ಹಾಗೂ ಮಾಹಿತಿ

ವರದಿ:ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :
ಅಂಚೆ ಚೀಟಿ ಮತ್ತು ಹಳೆಯ ಕಾಲದ ನಾಣ್ಯಗಳ ಪ್ರದರ್ಶನ ಹಾಗೂ ಮಾಹಿತಿ


ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ “ಗುಬ್ಬಚ್ಚಿಗೂಡು” ಬೇಸಿಗೆ ಶಿಬಿರ ಕಾರ್ಯಕ್ರಮದ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಅಂಚೆ ಚೀಟಿ ಮತ್ತು ಹಳೆಯ ಕಾಲದ ನಾಣ್ಯಗಳ ಪ್ರದರ್ಶನ ಹಾಗೂ ಮಾಹಿತಿ ಕುರಿತು ಸಂಪನ್ಮೂಲ ವ್ಯಕ್ತಿ ಫ್ರಾನ್ಸಿಸ್ ಜಾನ್ ಲೋಬೋ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಕೋಶಾಧಿಕಾರಿ ಮತ್ತು ಕಾರ್ಯಕ್ರಮದ ನಿರ್ದೇಶಕ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ದಿನೇಶ್ ಪೂಜಾರಿ ಬಿರೋಟ್ಟು, ಸುರೇಶ್ ಪೂಜಾರಿ ಕಾಸ್ರಬೈಲು, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಭಜನಾ ಸಮಿತಿ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಶ್ರೀ ವನದುರ್ಗಾ ಸ್ವ ಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಹರೀಶ್ ಪೂಜಾರಿ, ಹರಿಣಿ ಪೂಜಾರಿ, ಸುಲೋಚನ ಕೋಟ್ಯಾನ್, ವೀಣಾ ಪೂಜಾರಿ, ಹರಿಣಾಕ್ಷಿ ಪೂಜಾರಿ, ಪದ್ಮಶ್ರೀ ಪೂಜಾರಿ, ಅಶ್ವಿನಿ ಪ್ರಭಾಕರ್ ಸಂಘದ ಪದಾಧಿಕಾರಿಗಳು, ಮಹಿಳಾ ಸದಸ್ಯರು ಉಪಸ್ಥಿತಿತರಿದ್ದರು.