ವರದಿ:ವಾಲ್ಟರ್ ಮೊಂತೇರೊ
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಭಯೋತ್ಪಾದನಾ ವಿರೋಧಿ ದಿನಾಚರಣೆ, ಪ್ರತಿಜ್ಞಾ ವಿಧಿ ಬೋಧನೆ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ ಉಡುಪಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ಕುಂಟಲಗುಂಡಿಯ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ, ಪ್ರತಿಜ್ಞಾ ವಿಧಿ ಬೋಧನೆ ಮಂಗಳವಾರ ಜರಗಿತು.
ಪಡುಬಿದ್ರಿ ಘಟಕದ ಗೃಹರಕ್ಷಕದಳದ ಕಾಸ್ರಬೈಲು ಸುರೇಶ್ ಪೂಜಾರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದವರು ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ಧೃಢ ವಿಶ್ವಾಸದಿಂದ ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾರ್ಮಥ್ಯದಿಂದ ಎದುರಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿತರಿದ್ದ ಮಂಬಯಿ ಸಹಸ್ರ ಕಲಾವೃಂದದ ಕಾರ್ಯದರ್ಶಿ ಜ್ಯೋತಿ ಎಸ್. ಶೆಟ್ಟಿ ಮಾತನಾಡಿ ಯುದ್ಧ, ಭಯೋತ್ಪಾದನೆ ಮನುಕುಲಕ್ಕೆ ಮಾರಕವಾಗಿದೆ. ನಮಗೆ ಶಾಂತಿ ಸಾಮರಸ್ಯ ಬೇಕಿದೆ ಹೊರತು ಸಮರಗಳಲ್ಲ ಎಂದವರು ಹೇಳಿದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರಂಡ್ಸ್ ಕ್ಲಬ್ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಮತ್ತು ಪುಷ್ಪ ಕುಲಾಲ್ ದೇಶ ಭಕ್ತಿಗೀತೆಯನ್ನು ಪ್ರಸ್ತುತ ಪಡಿಸಿದರು. ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ವಂದಿಸಿದರು. ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತಿತರಿದ್ದರು.