ವರದಿ: ವಾಲ್ಟರ್ ಮೊಂತೇರೊ
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :
5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಆರೋಗ್ಯಪೂರ್ಣ ಬದುಕನ್ನು ಯೋಗದಿಂದ ಮಾಡಬಹುದು. ಈಗಿನ ಆಹಾರ ಪದ್ಧತಿಯಿಂದ ದಿನನಿತ್ಯ ಆರೋಗ್ಯ ಕೆಡುತ್ತಿದ್ದು, ನಾವು ನಿತ್ಯ ಯೋಗ ಮಾಡಿದರೆ ಆರೋಗ್ಯವಂತರಾಗಿರಲು ಸಾಧ್ಯ. ಎಷ್ಟೋ ಜೌಷಧಿಯಿಂದ ಗುಣಮುಖವಾಗದ ಕಾಯಿಲೆಗಳು ಯೋಗದಿಂದ ಗುಣಮುಖವಾಗುತ್ತದೆ ಎಂದು ಯೋಗ ನಿರ್ದೇಶಕ ಹರಿಪ್ರಸಾದ್ ಆಚಾರ್ಯ ಹೇಳಿದರು.
ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಜಂಟಿ ಆಶ್ರಯದಲ್ಲಿ ಶುಕ್ರವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ 5ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್ರವರು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ದೀಪ ಬೆಳಗಿಸಿ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಸಂಘದÀ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಪೂರ್ವಾಧ್ಯಕ್ಷರಾದ ದಿನೇಶ್ ಪೂಜಾರಿ ಬಿರೋಟ್ಟು, ಸುರೇಶ್ ಪೂಜಾರಿ ಕಾಸ್ರಬೈಲು, ಉಪಾಧ್ಯಕ್ಷ ಹರೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಭಜನಾ ಸಮಿತಿ ಅಧ್ಯಕ್ಷ ಮಂಜುನಾಥ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಿಠಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಉಪಾಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಜೊತೆ ಕಾರ್ಯದರ್ಶಿ ಬಾಲಕೃಷ್ಣ ಮಡಿವಾಳ, ಕೋಶಾಧಿಕಾರಿ ಲಲಿತಾ ಆಚಾರ್ಯ, ಸದಸ್ಯರಾದ ಲೀಲಾ ಪೂಜಾರಿ, ಹರಿಣಿ ಪೂಜಾರಿ, ಸುಲೋಚನಾ ಪೂಜಾರಿ, ಸುನೀತಾ ಪಿಂಟೋ ಮೊದಲಾದವರು ಯೋಗ ಶಿಬಿರದಲ್ಲಿ ಭಾಗವಹಿಸಿದರು.