ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೃಢ ವಿಶ್ವಾಸ ಹೊಂದಿರುವ ನಾವು,  ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು : ತಹಶೀಲ್ದಾರ್ ಕೆ.ಎನ್‌.ಸುಜಾತ 

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೃಢ ವಿಶ್ವಾಸ ಹೊಂದಿರುವ ನಾವು,  ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು : ತಹಶೀಲ್ದಾರ್ ಕೆ.ಎನ್‌.ಸುಜಾತ 

ಶ್ರೀನಿವಾಸಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೃಢ ವಿಶ್ವಾಸ ಹೊಂದಿರುವ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು ಎಂದು ತಹಶೀಲ್ದಾರ್ ಕೆ.ಎನ್‌.ಸುಜಾತ ಹೇಳಿದರು.
  ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮತದಾರರು ಹಾಗೂ ಕಚೇರಿ ಸಿಬ್ಬಂದಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಮತದಾರರು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸಬೇಕು. ಮತದಾರರು ತಮ್ಮ ಘನತೆ ಹಾಗೂ ಗೌರವ ಎತ್ತಿಹಿಡಿಯುವ ಮತದಾರರ ಪ್ರತಿಜ್ಞಾವಿಧಿ ಸ್ವೀಕರಿಸಬೇಕು ಎಂದು ಹೇಳಿದರು.
  ಉಪ ತಹಶೀಲ್ದಾರ್‌ ಎಂ.ಮಲ್ಲೇಶ್‌, ಚುನಾವಣಾ ಶಾಖೆ ಶಿರಸ್ತೇದಾರ್‌ ರುದ್ರಮ್ಮ, ವಿಷಯ ನಿರ್ವಾಹಕ ವಿಶ್ವನಾಥ್‌, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಇದ್ದರು.