ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಭವನೀಯ ಅನಾರೋಗ್ಯ ಪರಿಸಸ್ಥಿತಿಯಿಂದ ಪಾರಾಗಬೇಕು : ಎಪಿಎಂಸಿ ಕಾರ್ಯದರ್ಶಿ ಎಂ.ವೇಣುಗೋಪಾಲ್‌

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಭವನೀಯ ಅನಾರೋಗ್ಯ ಪರಿಸಸ್ಥಿತಿಯಿಂದ ಪಾರಾಗಬೇಕು : ಎಪಿಎಂಸಿ ಕಾರ್ಯದರ್ಶಿ ಎಂ.ವೇಣುಗೋಪಾಲ್‌ 
ಶ್ರೀನಿವಾಸಪುರ:  ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಭವನೀಯ ಅನಾರೋಗ್ಯ ಪರಿಸಸ್ಥಿತಿಯಿಂದ ಪಾರಾಗಬೇಕು ಎಂದು ಎಪಿಎಂಸಿ ಕಾರ್ಯದರ್ಶಿ ಎಂ.ವೇಣುಗೋಪಾಲ್‌ ಹೇಳಿದರು.
  ಪಟ್ಟಣದ ಹೊರ ವಲಯದಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಸ್ವಚ್ಛ ಶನಿವಾರ ಕಾರ್ಯಕ್ರಮದಡಿ ಎಪಿಎಂಸಿ ನೌಕರರ ವತಿಯಿಂದ ಏರ್ಪಡಿಸಲಾಗಿದ್ದ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ, ನಗರ ಸಭೆ ಹಾಗೂ ಪುರಸಭೆಗಳಲ್ಲಿ ಪ್ರತಿ ಮೊದಲನೆ ಹಾಗೂ ಮೂರನೆ ಶನಿವಾರ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಅದರಂತೆ ಪ್ರಾಂಗಣದಲ್ಲಿ ಸಿಬ್ಬಂದಿ ವತಿಯಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
  ಈ ಕಾರ್ಯಕ್ರಮ ಅತ್ಯಂತ ಸೂಕ್ತವಾಗಿದ್ದು, ಜಿಲ್ಲಾಧಿಕಾರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಇದು ಸಿಬ್ಬಂದಿಯ ಸಾಮಾಜಿಕ ಹೊಣೆಗಾರಿಕೆಯನ್ನು ಹೆಚ್ಚಿಸುತ್ತದೆ. ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ ಸಿಗುತ್ತದೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಸ್ವಚ್ಛತೆಯ ಮಹತ್ವ ಸಾರಬೇಕು ಎಂದು ಹೇಳಿದರು.
 ಎಪಿಎಂಸಿ ಸಹಾಯಕ ಕಾರ್ಯದರ್ಶಿ ಪಿ.ಎನ್.ಜಗನ್ನಾಥ್‌, ವರ್ತಕರಾದ ರವೀದ್ರರೆಡ್ಡಿ, ಎನ್‌.ಶಿವಣ್ಣ ಇದ್ದರು.