ಬೆಂಗಳೂರು ಡಿ. ಜೆ.ಹಳ್ಳಿ, ಕೆ.ಜಿ.ಹಳ್ಳಿ ಘಟನೆ ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ, ವಾಹನ ಜಖಂ ಖಂಡಿಸಿ ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ತಹಶೀಲ್ದಾರ್‌ ಶ್ರೀನಿವಾಸ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ : ಬೆಂಗಳೂರಿನ ದೇವರ ಜೀವನಹಳ್ಳಿ ( ಡಿ.ಜೆ.ಹಳ್ಳಿ ) ಮತ್ತು ಕೆ.ಜಿ.ಹಳ್ಳಿ ( ಕಾಡುಗೊಂಡಹಳ್ಳಿ ) ಘಟನೆ ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ , ವಾಹನ ಜಖಂ ಮಾಡಿರುವುದನ್ನು ಖಂಡಿಸಿ ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಪಟ್ಟಣದ ತಾಲೂಕು ಕಚೇರಿಗೆ ತೆರಳಿ ,ತಹಶೀಲ್ದಾರ್‌ ಶ್ರೀನಿವಾಸ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು . ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್ ಚಂದ್ರಶೇಖರ, ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಘಟನೆ ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ , ವಾಹನ ಜಖಂ ಮಾಡಿದ್ದಾರೆ . ರಾಜ್ಯ ಸರಕಾರ ಹಲ್ಲೆಕೋರರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು , ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು . ರಾಜ್ಯದಲ್ಲಿ ಆಗಾಗ ಇಂತಹ ಗೂಂಡಾ ವರ್ತನೆಗಳು ಪ್ರದರ್ಶಿಸಿ , ಬೆದರಿಕೆ ಹಾಕುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವುದು ಕಳವಳಕಾರಿಯಾಗಿದೆ . ಪತ್ರಕರ್ತರು ನಿರ್ಭಯವಾಗಿ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದೆ . ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಗಳ ಮೇಲೆ ಕಾನೂನು ಕ್ರಮ ಕೈಗೊಂಡು ಪತ್ರಕರ್ತರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು .ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿ ಶಬ್ಬೀರ್ ಅಹಮ್ಮದ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ ಉಪೇಂದ್ರ, ತಾಲ್ಲೂಕು ಗೌರವ ಅಧ್ಯಕ್ಷ ಎಸ್ ವೇಣುಗೋಪಾಲ, ಉಪಾಧ್ಯಕ್ಷ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಸಿ ನಾಗರಾಜ್, ಖಜಾಂಚಿ ಬಾಬು, ಸದಸ್ಯರಾದ  ಚೌರೆಡ್ಡಿ, ಚೌದಪ್ಪ, ಶ್ರೀನಿವಾಸ್ಮೂರ್ತಿ ,ರಮೇಶ್ ಕುಮಾರ್, ಎನ್ ಎಸ್ ಮೂರ್ತಿ, ಲಕ್ಷ್ಮಣ ಬಾಬು, ಎಸ್.ಎಚ್. ​​ನಾರಾಯಣಮೂರ್ತಿ, ಸೋಮ, ಕಿಶೋರ್ ಕುಮಾರ್, ಇನ್ನಿತರರು ಹಾಜರಿದ್ದರು .