ವರದಿ: ಚಂದ್ರಶೇಖರ ಶೆಟ್ಟಿ
ಮಾರ್ಚ್ 10: ಉಡುಪಿಯಲ್ಲಿ ಕಾಂಗ್ರೆಸ್ನಿಂದ ಪರಿವರ್ತನಾ ಯಾತ್ರೆ
ಮಾರ್ಚ್ 10 ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಉಡುಪಿಯ ರಾಯಲ್ ಗಾರ್ಡನ್ನಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪರಿವರ್ತನಾ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕೊಡವೂರು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾದ್ಯಕ್ಷ ಎಚ್.ಕೆ. ಪಾಟೀಲ್, ಸಚಿವ ಡಿ.ಕೆ.ಶಿವಕುಮಾರ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಹಾಗೂ ಮಲ್ಯಾಡಿ ಶಿವರಾಮ ಶೆಟ್ಟಿ ಮುಂತಾದ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅವರು ಇಂದು ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೆಎಫ್ಡಿಸಿ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ, ಕಿಸಾನ್ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ ಎರ್ಮಾಳು, ಮುಖಂಡರಾದ ಕೋಣಿ ಕೃಷ್ಣದೇವ ಕಾರಂತ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ಇಚ್ಛಿತಾರ್ಥ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಪುತ್ರನ್, ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇವತಿ ಸಂಪತ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.