ವರ್ಕ್ ಫ್ರಂ ಹೋಮ್ ಅವಧಿಯನ್ನು ವಿಸ್ತರಿಸಲು ಮನವಿ -ಕೆ.ವಿ ಜಗನ್ನಾಥ್

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ ಜು.27 : ಸರ್ಕಾರ ಯಾವುದೇ ಸೂಚನೆ ನೀಡಿದರು ಶಿಕ್ಷಕರು ಪಾಲಿಸಲು ಸಿದ್ದರಿದ್ದೇವೆ ಆದರೆ ರಾಜ್ಯದಲ್ಲಿ ತಜ್ಞರು ಮುಂದಿನ ದಿನಾಂಕಗಳಲ್ಲಿ ಕೊರೋನಾ ಸೋಂಕು ಮತ್ತಷ್ಟು ಉಲ್ಬಣವಾಗುವ ಸಾಧ್ಯತೆ ಇದೆ ಎಂಬ ವರದಿ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕರೋನಾ ಹೆಚ್ಚಾಗುತ್ತಿರುವ ಸಾಧ್ಯತೆ ಕಂಡುಬರುತ್ತಿರುವುದರಿಂದ ಶಿಕ್ಷಕರಿಗೆ ವರ್ಕ್ ಫ್ರಮ್ ಹೋಮ್ ಕಾರ್ಯವನ್ನು ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ ಜಗನ್ನಾಥ್‍ರವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿರವರನ್ನು ಅವರ ಕಛೇರಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಜಯರಾಮರೆಡ್ಡಿ ಮಾತನಾಡಿ ಪ್ರಾಥಮಿಕ ಶಿಕ್ಷಕರಿಗೆ ಮತ್ತು ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ ಬಡ್ತಿ ನೀಡುವ ಸಂಬಂಧ ಕೌನ್ಸಿಲಿಂಗ್ ಪ್ರಕ್ರಿಯೆ ಮಾಡಲಾಗುವುದು. ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಂದಿಗೆ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವುದು, ಪ್ರೌಢಶಾಲೆಗಳಿಗೆ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಕೌನ್ಸಿಲಿಂಗ್ ನೀಡುವುದು ಸೇರಿದಂತೆ 1998ರಲ್ಲಿ ನೇಮಕಗೊಂಡ ಶಿಕ್ಷಕರಿಗೆ ವೇತನ ತಾರತಮ್ಯ ಸರಿಪಡಿಸಲು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಪ್ರಕ್ರಿಯೆ ಕೈಗೊಳ್ಳಲಾಗುವುದೆಂದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ ಸಿ.ಆರ್. ಅಶೋಕ್, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ. ಶ್ರೀನವಾಸ್, ರಾಜ್ಯ ವಿಭಾಗೀಯ ಕಾರ್ಯದರ್ಶಿ ಆರ್. ಶ್ರೀನಿವಾಸನ್, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಗೋವಿಂದರೆಡ್ಡಿ, ಭಾರತ ಸೇವಾದಳದ ಕಾರ್ಯದರ್ಶಿ ಎಸ್.ವಿ. ಸುಧಾಕರ್, ಶಿಕ್ಷಕರ ಮುಖಂಡ ಬಾಲಾಜಿ ಮತ್ತಿತರರು ಹಾಜರಿದ್ದರು.