ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್ ಸೈಟ್ ವಿಳಾಸ kacdc.karnataka.gov.in ನ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 ರೊಳಾಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ . ಅರ್ಜಿಗಳನ್ನು ಅನ್ ಲೈನ್ ಮುಖಾಂತರ ಮಾತ್ರ ಸ್ವೀಕರಿಸ ಲಾಗುವುದು . ಮಹಿಳೆಯರಿಗೆ – ಶೇ .33 ರಷ್ಟು ಮತ್ತು ವಿಶೇಷಚೇತನರಿಗೆ – ಶೇ .5 ರಷ್ಟು ಮೀಸಲಾತಿ ಇರುತ್ತದೆ . ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ಗೆ ಜೋಡಣೆಯಾಗಿರಬೇಕು . ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು : ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು . ನಮೂನೆ – ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು . ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು . ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು . ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಯೋಜನೆಯಲ್ಲಿ ಸಣ್ಣ ವ್ಯಾಪಾರ , ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು . ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆರೂ . 3,00,000 / -ಗಳ ಮಿತಿಯ ಒಳಗಿರಬೇಕು . ಅರ್ಜಿ ದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು . ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು : ಈ ಯೋಜನೆಗೆಯಲ್ಲಿ ಇಂಜಿನಿಯರಿಂಗ್ , ವೈದ್ಯಕೀಯ , ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಅ.ಇ.ಖಿ ಅಥವಾ ಓಇಇಖಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ. , ಕೋರ್ಸ್ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು . ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ .6,00,000 / -ಗಳ ಮಿತಿಯೊಳಗಿರಬೇಕು . 2 ) ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು . ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು . ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ +91 9448451111, ಇ-ಮೇಲ್ support.kacdc @karnataka. gov.in ಹಾಗೂ ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು kacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ.