ಶುಭಾ ಶೇಟ್‍ ಇವರಿಗೆ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

JANANUDI.COM NETWORK

ಶುಭಾ ಶೇಟ್‍ ಇವರಿಗೆ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

 

ಕುಂದಾಪುರ ಯುಬಿಯಂಸಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವ ಶ್ರೀಮತಿ ಶುಭ ಶೇಟ್‍ರವರು ಉಡುಪಿ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಇವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆದರ್ಶ ಆಸ್ಪತ್ರೆಯ ಸಹಯೋಗದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ಹಲವಾರು ವರ್ಷಗಳಷ್ಟು ಕಾಲ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಪ್ರತಿಭಾವಂತ ಶಿಕ್ಷಕಿ. ಸರಸ್ವತಿ ವಿದ್ಯಾಲಯ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ಪ್ರಸ್ತುತ ಯುಬಿಯಂಸಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರು ನಾಗೂರಿನ ಬಿ.ಎಸ್.ಶ್ಯಾಮ ಶೇಟ್ ಮತ್ತು ಶ್ರೀಮತಿ ಕೆ.ಸಾವಿತ್ರಿ ಶೇಟ್ ದಂಪತಿಗಳ ಪುತ್ರಿ. ಖ್ಯಾತ ವಕೀಲರಾದ ನವೀನ ಕುಮಾರ್ ಕೆ.ರವರ ಪತ್ನಿ.