ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಅಪಘಾತದಲ್ಲಿ ಮೃತಪಟ್ಟ ಎಎಸ್‌ಐ ಮಂಜುನಾಥ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಯಿತು.
ಪಟ್ಟಣದ ಹೊರ ವಲಯದ ಶಿವಪುರ ಗ್ರಾಮದ ಸಮೀಪ ವರ್ತುಲ ರಸ್ತೆಯಲ್ಲಿ ಬುಧವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸಪುರ ಪೊಲೀಸ್ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ಮಂಜುನಾಥ್ (53) ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಆಸ್ಪತ್ರೆ ಸಿಬ್ಬಂದಿ ಮೃತ ಮಂಜುನಾಥ್ ಅವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು. ಶುಕ್ರವಾರ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ಪಟ್ಟಣದ ಪೊಲೀಸ್ ಠಾಣೆ ಹಾಗೂ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯನ್ನು ಸೀಲ್ ಡೌನ್ ಮಾಡಲಗಿದೆ. ಠಾಣೆಯನ್ನು ತಾತ್ಕಾಲಿಕವಾಗಿ ಸರ್ಕಾರಿ ನೌಕರರ ಭವನಕ್ಕೆ ವರ್ಗಾಯಿಸಲಾಗಿದೆ
.