ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು : ಶಾಸಕ ಕೆ.ಅರ್.ರಮೇಶ್ ಕುಮಾರ್
ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮದಲ್ಲಿ ರೂ.21 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ಎನ್‌ಆರ್‌ಐಜಿಯಿಂದ ರೂ.18 ಲಕ್ಷ ಹಾಗೂ ಶಾಸಕರ ಅನುದಾನದಿಂದ ರೂ.7 ಲಕ್ಷ ನೀಡಲಾಗಿದೆ. ಮುಂದೆ ಸಭೆಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ವಿಶಾಲವಾದ ಸಭಾಂಗಣ ನಿರ್ಮಿಸಲಾಗುವುದು ಎಂದು ಹೇಳಿದರು.
ಇಂದಿನ ಪರಿಸ್ಥಿತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಜನರ ಆರೋಗ್ಯ ಕೆಡದಂತೆ ಎಚ್ಚರ ವಹಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸಿ ಜಾರಿಗೆ ತರಬೇಕು. ಗುತ್ತಿಗೆದಾರರ ಪರ ಕೆಲಸ ಮಾಡದೆ ಜನರ ಪರವಾಗಿ ಕೆಲಸ ಮಾಡಬೇಕು. ಗ್ರಾಮ ಪಂಚಾಯಿತಿ ಚುನಾವಣೆ ಹತ್ತಿರವಾಗುತ್ತಿದೆ. ಸಾಧನೆ ಹೇಳಿ ಮತ ಕೇಳಬೇಕು ಎಂದು ಹೇಳಿದರು.
ತಾಲ್ಲೂಕಿನ ಆಲವಟ್ಟ ಗ್ರಾಮದ ಕೆರೆಗೆ ಎರಡು ತಿಂಗಳಲ್ಲಿ ಕೆಸಿ ವ್ಯಾಲಿ ನೀರು ಹರಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಇನ್ನು ನೀರು ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಮುಖಂಡರಾದ ಆಲವಟ್ಟ ಶ್ರೀರಾಮರೆಡ್ಡಿ, ಮಂಜುನಾಥರೆಡ್ಡಿ, ರೋಣೂರು ಚಂದ್ರಶೇಖರ್, ಕೆ.ಕೆ.ಮಂಜು, ವೆಂಕಟರೆಡ್ಡಿ, ಕೃಷ್ಣಮ್ಮ, ಲಕ್ಷ್ಮಣ, ಕೆ.ಜಿ.ನಾರಾಯಣಸ್ವಾಮಿ, ವೆಂಕಟೇಶ್ ಇದ್ದರು.