ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಪ್ರಜಾಪ್ರಭುತ್ವದ ಉಳಿವು ಹಾಗೂ ಸಮಾಜದ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಸಂವಿಧಾನ ನೀಡಿದ ಅಂಬೇಡ್ಕರ್ ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತಹೊಳಿದು ಸರಿಯಲ್ಲ. ಅವರು ಸಮಾಜದ ಎಲ್ಲ ವರ್ಗದ ಜನರ ಗೌರಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ 85 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಶ್ರಮಿಸಬೇಕು. ನೀರಿನ ಸಮಸ್ಯೆ ಅತಿಯಾಗಿ ಕಾಡುವ ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಸಬೇಕು. ಒಟಿಪಿ, ಹೆಬ್ಬೆಟ್ಟು ಎಂದು ಕಾಡದೆ ಪಡಿತರ ವಸ್ತುಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಉಪ ತಹಶೀಲ್ದಾರ್ ಮಲ್ಲೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಎನ್.ಕೆ.ರಾಘವೇಂದ್ರ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳಾದ ಅಪ್ಪಿರೆಡ್ಡಿ, ಶ್ರೀನಿವಾಸಮೂರ್ತಿ, ದಲಿತ ಮುಖಂಡರಾದ ರಾಮಾಜಿನಮ್ಮ, ವರ್ತನಹಳ್ಳಿ ವೆಂಕಟೇಶ್, ಚಲ್ದಿಗಾನಹಳ್ಳಿ ಈೀರಪ್ಪ, ನಾಯಾಯಣಸ್ವಾಮಿ, ಶ್ರೀನಿವಾಸಮೂರ್ತಿ ಇದ್ದರು.