ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭವನ್ನು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಉದ್ಘಾಟಿಸಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭವನ್ನು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಉದ್ಘಾಟಿಸಿದರು.
ಶ್ರೀನಿವಾಸಪುರ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದು  ಶಾಸಕ ಕೆ.ಆರ್‌.ರಮೇಶ್ ಕುಮಾರ್‌ ಹೇಳಿದರು.
  ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕು. ಅಂಥ ವಾತಾವರನ ದೆಹಲಿ ಶಾಲೆಗಳಲ್ಲಿದೆ ಎಂದು ಹೇಳಿದರು.
  ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಶಾಲೆಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಿದ ಪರಿಣಾಮವಾಗಿಯೇ, ತಾಲ್ಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆಯಲು ಸಾಧ್ಯವಾಯಿತು. ಈ ಪರಿಸ್ಥಿತಿ ಮುಂದುವರಿಯಬೇಕು. ಎಂದು ಹೇಳಿದರು.
  ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿ ಹುದುಗಿರುವ ಕೌಶಲ್ಯ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುತ್ತದೆ.  ಪಠ್ಯ ಚಟುವಟಿಕೆಗೆ ಕೊಟ್ಟಷ್ಟೇ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆಗೆ ನೀಡಬೇಕು ಎಂದು ಹೇಳಿದರು.
  ಕಾರ್ಯಕ್ರಮದ ನೋಡಲ್‌ ಅಧಿಕಾರಿ ಹನುಮೇಗೌಡ ಮಾತನಾಡಿ, ಪ್ರತಿಭಾ ಕಾರಂಜಿ, ಪ್ರತಿಭೆಗಳ ಉತ್ಸವವಾಗಿದೆ. ಕಾರ್ಯಕ್ರಮದಲ್ಲಿ 2500 ಮಕ್ಕಳು ಹಾಗೂ 500 ಶಿಕ್ಷಕರು ಸೇರಿದ್ದಾರೆ. ಅವರು ತಮ್ಮ ಅನುಭವಗಳನ್ನು ಹಾಗೂ ಪ್ರತಿಭೆಯನ್ನು ಪರಸ್ಪರ ಹಂಚಿಕೊಳ್ಳುತ್ತಾರೆ ಎಂದು ಹೇಳಿದರು.
  ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರೇಣುಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್‌, ಮುಖಂಡರಾದ ಕೆ.ಎಚ್.ಸಂಪತ್‌ ಕುಮಾರ್‌, ಕಲಾ ಶಂಕರ್, ರೂಪವತಿ, ವೆಂಕಟೇಶ್‌, ಇಸಿಒಗಳಾದ ಅಮರನಾಥ್, ಸುಬ್ರಮಣಿ, ಪ್ರಾಂಶುಪಾಲ ಸುಬ್ರಮಣಿ, ರಾಮಕೃಷ್ಣಾರೆಡ್ಡಿ, ವೆಂಕಟಸ್ವಾಮಿ, ಅಪ್ಪಣ್ಣ, ತಿಪ್ಪಣ್ಣ ಇದ್ದರು.