ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ ಪಟ್ಟಣದ ಎಪಿಎಂಸಿ ಅಧ್ಯಕ್ಷರಾಗಿ ಎಸ್.ಸಿ.ರಮೇಶ್, ಉಪಾಧ್ಯಕ್ಷರಾಗಿ ಜಿ.ಕೆ.ರಾಜಣ್ಣ ಅವಿರೋಧವಾಗಿ ಆಯ್ಕೆ

ಶ್ರೀನಿವಾಸಪುರ: ಪಟ್ಟಣದ ಎಪಿಎಂಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಏರ್ಪಡಿಸಲಾಗಿದ್ದ ಚುನಾವಣೆಯಲ್ಲಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಸಿ.ರಮೇಶ್, ಉಪಾಧ್ಯಕ್ಷರಾಗಿ ಜಿ.ಕೆ.ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಎನ್.ರಾಜೇಂದ್ರ ಪ್ರಸಾದ್ ಹಾಗೂ ಉಪಾಧ್ಯಕ್ಷ ಪೆದ್ದರೆಡ್ಡಿ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ವ್ಯವಸ್ಥೆ ಮಾಡಲಾಗಿತ್ತು. 13 ಸದಸ್ಯರು ಹಾಗೂ ಮೂರು ಮಂದಿ ನಾಮ ನರ್ದೇಶಿತ ಸದಸ್ಯರು ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ.ರಮೇಶ್, ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಆದರೆ ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಹಿಂಪಡೆದ ಪರಣಾಮವಾಗಿ ಎಸ್.ಸಿ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರ ಸ್ಥಾನಕ್ಕೆ ಪೆದ್ದರೆಡ್ಡಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಅವರ ಆಯ್ಕೆಯೂ ಅವಿರೋಧವಾಗಿ ನಡೆಯಿತು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಎಪಿಎಂಸಿ ಕಾರ್ಯದರ್ಶಿ ಎಂ.ವೇಣುಗೋಪಾಲ್ ಇದ್ದರು.
ಕಾಂಗ್ರೆಸ್ ಮಖಂಡರಾದ ಸಂಜಯ್ರೆಡ್ಡಿ, ಎನ್.ರಾಜೇಂದ್ರ ಪ್ರಸಾದ್ ದಿಂಬಾಲ ಅಶೋಕ್, ಮಂಜುನಾಥರೆಡ್ಡಿ, ರೋಣೂರು ಚಂದ್ರಶೇಖರ್, ಕೆ.ಕೆ.ಮಂಜು , ಅಯ್ಯಪ್ಪ ಇದ್ದರು.