ಶ್ರೀನಿವಾಸಪುರ: ಪಟ್ಟಣದಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಪ್ರತಿಭಟನಾ ಪ್ರದರ್ಶನ ನಡೆಸಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ: ಪಟ್ಟಣದಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಪ್ರತಿಭಟನಾ ಪ್ರದರ್ಶನ ನಡೆಸಿದರು.
  ಕರ್ನಾಟಕ ಪ್ರಾಂತ ರೈತ ಸಂಘ, ಅಂಗನವಾಡಿ ನೌಕರರ ಸಂಘ, ಮಧ್ಯಾಹ್ನದ ಬಿಸಿಯೂಟ ನೌಕರರ ಸಂಘ, ಗ್ರಾಮ ಪಂಚಾಯಿತಿ ನೌಕರರ ಸಂಘ, ಕಟ್ಟಡ ಕಾರ್ಮಿಕರ ಸಂಘ, ಅಮಾಲಿ ಕಾರ್ಮಿಕರ ಸಂಘ ಹಾಗೂ ಟಿಪ್ಪು ಕ್ರಾಂತಿ ಸೇನೆ ಕಾರ್ಯಕರ್ತರು ಮುಷ್ಕರದಲ್ಲಿ ಭಾಗವಹಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
  ಉಳಿದಂತೆ ಜನ ಜೀವನ ಎಂದಿನಂತೆಯೇ ಇತ್ತು. ವಾಹನ ಸಂಚಾರ ಸಾಮಾನ್ಯವಾಗಿತ್ತು. ಶಾಲಾ ಕಾಲೇಜುಗಳು ನಡೆದವು, ಆದರೂ ಬಂದ್‌ ನಡೆಯುತ್ತದೆ ಎಂಬ ಊಹಾ ಪೋಹದ ನಡುವೆ ಪಟ್ಟಣಕ್ಕೆ ಹೊರಗಿನಿಂದ ಬರುವವರ ಸಂಖ್ಯೆ ಕಡಿಮೆ ಇತ್ತು. ತಾಲ್ಲೂಕು ಕಚೇರಿ ಸೇರಿದಂತೆ ಎಲ್ಲ ಕಚೇರಿಗಳಲ್ಲೂ ಸಾರ್ವಜನಿಕರ ದಟ್ಟಣೆ ಇರಲಿಲ್ಲ. 
  ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌, ವಿವಿಧ ಸಂಘಟನೆಗಳ ಮುಖಂಡರಾದ ಜಿ.ಈಶ್ವರಮ್ಮ, ಮೂರ್ತಿ, ಎಂ.ಜಿ.ಜಾಕೀರ್‌ ಆಲಿ, ಅಮರನಾರಾಯಣ, ವೆಂಕಟರಮಣಪ್ಪ, ಲಕ್ಷ್ಮಿದೇವಮ್ಮ, ಇಮ್ರಾನ್‌ ಖಾನ್‌, ಜಾವಿದ್‌ ಪಾಷ. ವಿಶ್ವ, ಮಮತ, ಅನಂತಮ್ಮ, ಸೋಮನಾಥ್‌, ಪ್ರೇಮಕುಮಾರ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
  ತಾಲ್ಲೂಕಿನ ರೋಜೇನಹಳ್ಳಿ ಕ್ರಾಸ್‌ ಸಮೀಪ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ ಅವರ ನೇತೃತ್ವದಲ್ಲಿ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.
  ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.