ಶ್ರೀನಿವಾಸಪುರ: ಭಾರತ್‌ ಬಂದ್‌ ಕರೆಗೆ ಸ್ಪಂದಿಸಿ ಮಂಗಳವಾರ ಪಟ್ಟಣದಲ್ಲಿ ಸಂಪೂರ್ಣ ಬಂದ್‌ ಆಚರಿಸಲಾಯಿತು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ವಾಹನ ಸಂಚಾರ ಸಂಪೂರ್ನ ಸ್ಥಗಿತಗೊಂಡಿತ್ತು. ಯಾವುದೇ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಯಲಿಲ್ಲ. ರಾಜ್ಯ ರಸ್ತೆ ಸಾರಿಗೆ ಬಸ್‌ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಸಾರ್ವಜನಿಕರು ಅತ್ತ ಕಡೆ ಸುಳಿಯಲಿಲ್ಲ.    ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಮಾವು ಬೆಳೆಗಾರರ ಸಂಘ, ಹಮಾಲಿ, ಅಂಗನವಾಡಿ, ಕಟ್ಟಡ ಕಾರ್ಮಿಕರ ಸಂಘಟನೆ ಸೇರಿದಂತೆ ಹಲವು ರೈತ ಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿ, ಬಸ್‌ ನಿಲ್ದಾಣದ ಸಮೀಪ ರಸ್ತೆ ತಡೆ ನಡೆಸಿದರು.   ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ, ಉಪಾಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌, ಜಿಲ್ಲಾ ಸಿಐಟಿಯು ಉಪಾಧ್ಯಕ್ಷೆ ಜಿ.ಈಶ್ವರಮ್ಮ, ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ, ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಚಿನ್ನಪ್ಪರೆಡ್ಡಿ ಪ್ರತಿಭಟನ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರದ ರೈತ ವಿರೋಧಿ ನಿಲುವನ್ನು ಖಂಡಿಸಿದರು. ರೈತರ ಹಿತಕ್ಕೆ ಮಾರಕವಾಗಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು.  ವಿವಿಧ ಸಂಘಟನೆಗಳ ಮುಖಂಡರಾದ ಮಾಸ್ತೇನಹಳ್ಳಿ ನಾರಾಯಣಸ್ವಾಮಿ, ನಂಬಿಹಳ್ಳಿ ಶ್ರೀರಾಮರೆಡ್ಡಿ, ಬೈರಾರೆಡ್ಡಿ, ಶ್ರೀಧರ್‌, ಹೆಬ್ಬಟ ರಮೇಶ್‌, ನಾಗಭೂಷಣ, ಮರಸನಪಲ್ಲಿ ನಂಜಪ್ಪ, ಆರ್‌.ವೆಂಕಟೇಶ್‌, B.G ಸೈಯದ್‌, ಫಾರೂಕ್‌, ಎನ್‌.ವೀರಪ್ಪರೆಡ್ಡಿ, ಮೂರ್ತಿ, ರಾಧಮ್ಮ,ಮಮತ, ಸುಬ್ರಮಣಿ, ಆಂಜಪ್ಪ, ಶಿವಣ್ಣ, ಮಂಜುನಾಥ್‌ ಇದ್ದರು.