ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ, ಹೆಣ್ಣು ಮಕ್ಕಳು ಕಾನೂನು ರಕ್ಷಣೆ ಪಡೆಯಬೇಕು. ಸಮಾಜಕ್ಕೆ ಹೆದರಿ ದೌರ್ಜನ್ಯವನ್ನು ಸಹಿಸಬಾರದು : ಜಎಂಎಫ್‌ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಚ್.ಆರ್.ದೇವರಾಜು
ಶ್ರೀನಿವಾಸಪುರ: ಹೆಣ್ಣು ಮಕ್ಕಳು ಕಾನೂನು ರಕ್ಷಣೆ ಪಡೆಯಬೇಕು. ಸಮಾಜಕ್ಕೆ ಹೆದರಿ ದೌರ್ಜನ್ಯವನ್ನು ಸಹಿಸಬಾರದು ಕಾನೂನು ರಕ್ಷಣೆ ಪಡೆಯಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಚ್.ಆರ್.ದೇವರಾಜು ಹೇಳಿದರು.
ಪಟ್ಟಣದ ಸರ್ಕಾರಿ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಪುರಸಭೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಯಾತ್ರೆ ಹಾಗೂ ಜನತಾ ನ್ಯಾಯಾಲಯ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರ ಹಕ್ಕುಗಳಿಗೆ ಧಕ್ಕೆ ಉಂಟಾದಾಗ ಅಥವಾ ಕಿರುಕುಳಕ್ಕೆ ಒಳಗಾದಾಗ ನ್ಯಾಯಾಲಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಿ ರಕ್ಷಣೆ ಪಡೆಯಬೇಕು ಎಂದು ಹೇಳಿದರು.
ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್ ಮಾತನಾಡಿ, ಶಾಲೆಯಲ್ಲಿ ಪ್ರಶಾಂತ ವಾತಾವರಣ ಇರಬೇಕು. ಮಕ್ಕಳು ಯಾವುದೇ ಅಡಚಣೆ ಇಲ್ಲದೆ ಕಲಿಯಲು ಪೂರಕವಾದ ವಾತಾವರಣ ನಿರ್ಮಿಸಿಕೊಡಬೇಕು. ಇಲ್ಲಿನ ಶಾಲಾ ಆಟದ ಮೈದಾನದಲ್ಲಿ ಖಾಸಗಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ಅನಾನುಕೂಲ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟವರು ಮಕ್ಕಳು ಆತಂಕ ರಹಿತವಾಗಿ ಆಟವಾಡಲು ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕ ಬೈರೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ಜಯರಾಮೇಗೌಡ, ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ವಕೀಲರಾದ ಕೆ.ಶಿವಪ್ಪ, ರಾಜಗೋಪಾಲರೆಡ್ಡಿ ಇದ್ದರು.