ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಕನಕದಾಸರ  ಜಯಂತ್ಯುತ್ಸವ ಸಮಾರಂಭವನ್ನು ತಹಶೀಲ್ದಾರ್‌ ಕೆ.ಎನ್‌.ಸುಜಾತ ಉದ್ಘಾಟಿಸಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಕನಕದಾಸರ  ಜಯಂತ್ಯುತ್ಸವ ಸಮಾರಂಭವನ್ನು ತಹಶೀಲ್ದಾರ್‌ ಕೆ.ಎನ್‌.ಸುಜಾತ ಉದ್ಘಾಟಿಸಿದರು.

 

ಶ್ರೀನಿವಾಸಪುರ: ಪ್ರಿಯೊಬ್ಬರೂ ಕನಕದಾಸರ ಆದರ್ಶ ಪಾಲಿಸಬೇಕು ಎಂದು ತಹಶೀಲ್ದಾರ್‌ ಕೆ.ಎನ್‌.ಸುಜಾತ ಹೇಳಿದರು.

  ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಏರ್ಪಡಿಸಿದ್ದ ಕನಕದಾಸರ 532ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 

  ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ಎ.ವೆಂಕಟರೆಡ್ಡಿ ಮಾತನಾಡಿ, ಕನಕದಾಸರು ಭಕ್ತಿ, ವೈರಾಗ್ಯ ಹಾಗೂ ಮಾನವೀಯತೆಯ ಪ್ರತೀಕ. ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಡೊಂಕನ್ನು ತಿದ್ದಲು ಪ್ರಯತ್ನಿಸಿದ್ದಾರೆ. ಅವರ ಬದುಕಿನಂತೆಯೇ ಸಾಹಿತ್ಯವೂ ಕೂಡ ಸರಳ ಹಾಗೂ ಅರ್ಥಗರ್ಭಿತ. ಕನಕದಾಸರಂಥ ಸಮಾಜ ಸುಧಾರಕರನ್ನು ಯಾವುದೇ ಒಂದು ಧರ್ಮ ಅಥವಾ ಜಾತಿಗೆ ಸೀಮಿತಗೊಳಿಸಬಾರದು ಎಂದು ಹೇಳಿದರು.

   ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ವೇಮಣ್ಣ ಮಾತನಾಡಿ, ಕುರುಬ ಸಮಾಜ ಸಾಂಘಿಕ ಪ್ರಯತ್ನದ ಮೂಲಕ ಪ್ರಗತಿ ಸಾಧಿಸಬೇಕು.  ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌, ದಾನಿಗಳು ಹಾಗೂ ಸರ್ಕಾರದ ನೆರವಿನಿಂದ ಕನಕ ಸಮುದಾಯ ಭವನ ನಿರ್ಮಿಸಲಾಗಿದೆ. ಸಮಾಜದ ಬಂಧುಗಳು ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

  ಮೆರವಣಿಗೆ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ಟ್ರ್ಯಾಕ್ಟರ್‌ಗಳಲ್ಲಿ ತರಲಾಗಿದ್ದ ಕನಕದಾಸರ ಭಾವಚಿತ್ರ ಒಳಗೊಂಡ ಪಲ್ಲಕಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಡೊಳ್ಳು ಕುಣಿತ, ವೀರಗಾಸೆ, ಮಕ್ಕಳ ವೇಷಭೂಷಣ ಮೆರವಣಿಗೆಯ ವಿಶೇಷವಾಗಿತ್ತು.

  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಎಂ.ನಾಗರಾಜ್‌, ಆರ್‌.ರವಿಕುಮಾರ್‌, ವಿ.ಶ್ರೀರಾಮೇಗೌಡ, ಜಿ.ಎಂ.ಗೋವಿಂದರೆಡ್ಡಿ, ಶೇಖರ್‌, ಮೂರ್ತಿ, ಗೋಪಾಲ್‌, ಸಿ.ಎಂ.ವೆಂಕಟರವಣ, ರಾಮಚಂದ್ರೇಗೌಡ ಇದ್ದರು.